ಕರ್ನಾಟಕ

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ: ನಟ ಜಗ್ಗೇಶ್, ನಿರ್ಮಲಾ ಸೀತಾರಾಮನ್ ಅವರಿಗೆ ಟಿಕೆಟ್

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಹಾಗೂ ರಾಜಕಾರಣಿ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಒಕ್ಕಲಿಗ ಸಮುದಾಯದ ಜಗ್ಗೇಶ್ ಅವರಿಗೆ ಮಣೆ ಹಾಕಲಾಗಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ತುರುವೇಕೆರೆ ಮಾಜಿ ಶಾಸಕ ಜಗ್ಗೇಶ್ ಅವರು ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ನಟ ಜಗ್ಗೇಶ್ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್​ ನೀಡಿದೆ.

ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಬಂದಿದ್ದ ಕೆ.ಸಿ. ರಾಮಮೂರ್ತಿ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ಆದರೆ ಒಕ್ಕಲಿಗ ಸಮುದಾಯವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಜಗ್ಗೇಶ್ ಅವರ ಹೆಸರನ್ನು ಪರಿಗಣನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದ್ದು, ವಿಧಾನಸಭೆಯಲ್ಲಿ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ ನಿಂದ ಒಬ್ಬರನ್ನು ಆಯ್ಕೆ ಮಾಡಲು ಅವಕಾಶ ಇದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರೂ ಪಕ್ಷಗಳಲ್ಲಿ ಯಾವುದೇ ಬಹುಮತವಿಲ್ಲ. ಒಂದು ಪಕ್ಷ ಮತ್ತೊಂದು ಪಕ್ಷವನ್ನ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Comments are closed.