ಕರಾವಳಿ

75 ಸಂವತ್ಸರಗಳನ್ನು ಪೂರೈಸಿದ ಮಂಗಳೂರಿನ ಶ್ರೀ ರಾಮಕೃಷ್ಣ ಮದಲ್ಲಿ ಅಮೃತ ಮಹೋತ್ಸವ ಸಂಭ್ರಮ

Pinterest LinkedIn Tumblr

ಮಂಗಳೂರು: ಮಂಗಳೂರಿನ ಶ್ರೀ ರಾಮಕೃಷ್ಣ ಮಠ ಜೂ. 3ರಂದು 75 ಸಂವತ್ಸರಗಳನ್ನು ಪೂರ್ಣಗೊಳಿಸುತ್ತಿದ್ದು, ಜೂ.3 ಮತ್ತು 4 ರಂದು ನಗರದಲ್ಲಿರುವ ರಾಮಕೃಷ್ಣ ಮಠದ ಸಭಾಭವನದಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹೇಳಿದರು.

ನಗರದ ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜೂ.3ರಂದು ಬೆಳಿಗ್ಗೆ 6.3೦ರಿಂದ ರಾಮಕೃಷ್ಣ ಪರಮಹಂಸರಿಗೆ ವಿಶೇಷ ಪೂಜೆ ಹಾಗೂ ಹೋಮಗಳು ಕಾಂಚೀಪುರಂನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಸತ್ಯ ವಿದಾನಂದಜಿ ಮಹರಾಜ್ ಅವರು ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸ ಅಮೃತ ಸದನದಲ್ಲಿ ನೆರವೇರಿಸಲಿದ್ದಾರೆ.

ಬೆಳಗ್ಗೆ 8.15ಕ್ಕೆ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮಿ ಗೌತಮಾನಂದಜಿ ಮಹಾರಾಜ್‌ ಉಪಸ್ಥಿತಿಯಲ್ಲಿ ಸಾಧು, ಭಕ್ತರ ಶೋಭಾಯಾತ್ರೆ ಶ್ರೀಮಠದ ವರೆಗೆ ನಡೆಯಲಿದೆ. ಬಳಿಕ ಮಠದ ನೂತನ ಮಹಾದ್ವಾರ ಲೋಕಾರ್ಪಣೆ ಅಮೃತ ಸದನ ಉದ್ಘಾಟನೆಯಾಗಲಿದೆ ಎಂದರು.

ಬೆಳಿಗ್ಗೆ 9.15ಕ್ಕೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರು ಶ್ರೀ ಮಠದ ನೂತನ ಮಹಾದ್ವಾರದ ಲೋಕಾರ್ಪಣೆ ಮಾಡಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಅಮೃತ ಸದನ ಸ್ವಾಮಿ ವೀರೇಶ್ವರಾನಂದ ಸಾಧು ನಿವಾಸ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 9.40ಕ್ಕೆ ಅಮೃತ ಭವನ ಸ್ವಾಮಿ ವಿವೇಕಾನಂದ ತರಬೇತಿ ಕೇಂದ್ರದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಹಾಗೂ ಅಡಿಗಲ್ಲನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ ಎಂದರು.

10 ಗಂಟೆಗೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರ ದಿವ್ಯ ಸನ್ನಿಧಾನದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹಾಗೂ ಬೇಲೂರು ಹಾಗೂ ಪಶ್ಚಿಮ ಬಂಗಾಳ ಮಠದ ವಿಶ್ವಸ್ಥ ಸ್ವಾಮಿ ಮುಕ್ತಿದಾನಂದಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್. ವಿನಯ್ ಹೆಗ್ಡೆ, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ್ ಭಂಡಾರಿ, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್, ಗದಗದ ಶಾಸಕ ಡಿ.ಆರ್ ಪಾಟೀಲ್ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್, ಉದ್ಯಮಿ ದಯಾನಂದ ಪೈ ಭಾಗವಹಿಸಲಿದ್ದಾರೆ ಎಂದರು.

ಅಮೃತ ಮಹೋತ್ಸವದ ಪ್ರಯುಕ್ತ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಅಂಚೆ ಲಕೋಟೆಯನ್ನು ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಎನ್‌. ರಾಜೇಂದ್ರ ಕುಮಾರ್‌ ಮಠಕ್ಕೆ ಹಸ್ತಾಂತರಿಸಲಿದ್ದಾರೆ ಎಂದರು.

ಶಾಸಕ ವೇದವ್ಯಾಸ ಕಾಮತ್‌, ವಿ. ಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ ಕಾರ್ಣಿಕ್‌, ಜಿಲ್ಲಾಧಿಕಾರಿ ಡಾ| ರಾಜೇಂದ್ರ, ಜಿಪಂ ಸಿಇಒ ಡಾ| ಕುಮಾರ್‌, ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್‌, ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪಾಲ್ಗೊಳ್ಳಲಿದ್ದಾರೆ ಎಂದರು.

ಜೂ.4 ರಂದು ಸಂಜೆ 4.45ಕ್ಕೆ ಬೇಲೂರು ಮಠ ಹಾಗೂ ಪಶ್ಚಿಮ ಬಂಗಾಳದ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಷನ್‌ನ ಉಪಾಧ್ಯಕ್ಷ ಸ್ವಾಮಿ ಗೌತಮಾನಂದಜಿ ಮಹಾರಾಜ್ ಅವರ ದಿವ್ಯ ಸನ್ನಿಧಾನದಲ್ಲಿ ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಹಾಗೂ ಬೇಲೂರು ಹಾಗೂ ಪಶ್ಚಿಮ ಬಂಗಾಳ ಮಠದ ವಿಶ್ವಸ್ಥ ಸ್ವಾಮಿ ಮುಕ್ತಿದಾನಂದಜಿ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಝ್ಯ ಅತಿಥಿಗಳಾಗಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ನಿಕ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸಿಇಓ ಡಾ. ಕುಮಾರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಎರಡು ದಿನಗಳಿಲ್ಲಿ 56 ಚಿಂತನ ಮಂಥನಗಳು ನಡೆಯಲಿದ್ದು, 18 ಮಂದಿ ಸರಳತೆಯ ಬಗ್ಗೆ ಮಾತನಾಡಲಿದ್ದಾರೆ. ಈಗಾಗಲೇ ಹೊರಗಿನಿಂದ400 ಜನ ನೊಂದಣಿ ಮಾಡಿಕೊಂಡಿದ್ದು, ಜಿಲ್ಲೆಯಿಂದ 300-400 ಜನ ಭಾಗವಹಿಸಲಿದ್ದಾರೆ. ದೇಶದಾದ್ಯಂತ 75ಕ್ಕೂ ಹೆಚ್ಚು ಸಾಧುಗಳು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಮಿ ಏಕಾನಂದಜಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಠದ ಸ್ವಯಂ ಸೇವಕ ದಿಲ್‌ರಾಜ್ ಆಳ್ವ, ರಂಜನ್‌ ಬೆಳ್ಳರ್ಪಾಡಿ ಉಪಸ್ಥಿತರಿದ್ದರು.

Comments are closed.