ಕರ್ನಾಟಕ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿ.ಸಿ ನಾಗೇಶ್

Pinterest LinkedIn Tumblr

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಸಚಿವ ಬಿ.ಸಿ ನಾಗೇಶ್ ಅವರು ನಾಳೆ ಬೆಳಗ್ಗೆ 11 ಗಂಟೆ ಪಿಯು ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Comments are closed.