(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಉಡುಪಿ ಜಿಲ್ಲೆಯ ಕಮಲಶಿಲೆ ಗ್ರಾಮದ ಹಳ್ಳಿಹೊಳೆಯ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಶಂಕರನಾರಾಯಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೈಂದೂರು ಉಪ್ಪುಂದದ ಶ್ರೀಧರ ಮಡಿವಾಳ (38) ಬಂಧಿತ ಆರೋಪಿ.
ಘಟನೆ ವಿವರ: ಜೂ.18 ರಂದು ರಾತ್ರಿ ಸುಮಾರು ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಕೋಣೆಯಲ್ಲಿ ಇರಿಸಿದ ಸುಮಾರು 1,30,000 ಲಕ್ಷ ಬೆಲೆ ಬಾಳುವ 28 ಗ್ರಾಂ ತೂಕದ 2 ಚಿನ್ನದ ಬಳೆ ಸುಮಾರು 1,50,000 ಲಕ್ಷ ಬೆಲೆ ಬಾಳುವ ಮಲ್ಲಿಗೆ ಮಿಟ್ಟಿಯ 30 ಗ್ರಾಂ ಚಿನ್ನದ ಸರ -1, ಸುಮಾರು 20,000 ಬೆಲೆ ಬಾಳುವ ಮೂರು ಹರಳಿನ 4 ಗ್ರಾಂ ಚಿನ್ನದ ಉಂಗುರ, 5 ಸಾವಿರ ನಗದು ಹಣ ಕಳವು ಮಾಡಿದ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಕಳವು ಮಾಡಿದ 2 ಚಿನ್ನದ ಬಳೆಗಳು, 1 ಮಲ್ಲಿಗೆ ಮಿಟ್ಟಿಯ ಚಿನ್ನದ ಸರ, ಹಾಗೂ ಒಂದು ಚಿನ್ನದ ಉಂಗುರ ವಶಪಡಿಸಿಕೊಳ್ಳಲಾಗಿದ್ದು ಈ ಸೊತ್ತುಗಳ ಮೌಲ್ಯ ಸುಮಾರು 3 ಲಕ್ಷ ರೂ ಆಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ನಿರ್ದೇಶನದಂತೆ ಕುಂದಾಪುರ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ ಕೆ. ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಗೋಪಿಕೃಷ್ಣ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಈ ಕಾರ್ಯಚರಣೆಯಲ್ಲಿ ಶಂಕರನಾರಯಣ ಪೊಲೀಸ್ ಠಾಣಾಧಿಕಾರಿ ಶ್ರೀಧರ ನಾಯ್ಕ, ಪಿಎಸ್ಐ ಸುದರ್ಶನ್ ಹಾಗೂ ಸಿಬ್ಬಂದಿಗಳಾದ ಸೀತರಾಮ ಶೆಟ್ಟಿಗಾರ್, ರಾಘವೇಂದ್ರ , ಗೋಪಾಲ ಕೃಷ್ಣ, ಮಂಜುನಾಥ್, ರಾಕೇಶ್, ಅನಿಲ್ ಕುಮಾರ್, ವಿಲ್ಫ್ರೆಡ್ ಡಿಸೋಜ, ವಿಲಾಸ್ ರಾಥೋಡ್, ಆಲಿಂಗರಾಯ ಕಾಟೆ, ಚಂದ್ರ ಕುಮಾರ್, ಜಯರಾಮ ನಾಯ್ಕ ಮೊದಲಾದವರು ಪಾಲ್ಗೊಂಡಿದ್ದಾರೆ.
Comments are closed.