ಕರಾವಳಿ

ಅಗ್ನಿ ವೀರರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿ ದೈಹಿಕ‌ ಶಿಕ್ಷಣ ಮೀಸಲಾತಿ ಚಿಂತನೆ: ಸಚಿವ ಕೋಟ

Pinterest LinkedIn Tumblr

ಮಂಗಳೂರು: ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅಗ್ನಿ ಪಥಕ್ಕೆ ಅಗ್ನಿ ಕೊಡುವವರು ಗಲಾಟೆ ಆರಂಭಿಸಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಅಗ್ನಿಪಥ ಯೋಜನೆಯಲ್ಲಿ 4 ವರ್ಷಗಳ ತರಬೇತಿ ನೀಡಲಾಗುತ್ತದೆ. ಅಗ್ನಿವೀರರಿಗೆ ಮೀಸಲಿಡುವ ಬಗ್ಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿ ಇದೆ. ಅಗ್ನಿ ವೀರರಿಗೆ ದೈಹಿಕ ಶಿಕ್ಷಕ ಹುದ್ದೆ ನೀಡಲು ಚಿಂತನೆ ನಡೆಸಲಾಗಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ, ಸರ್ಕಾರಕ್ಕೆ ಟಿಪ್ಪಣಿ ಕೊಟ್ಟಿದ್ದೇನೆ. ಶೇಕಡ 75ರಷ್ಟು ಅಗ್ನಿವೀರರಿಗೆ ಮೀಸಲಿಡುವ ಯೋಚನೆ ಇದೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಸತಿ ಶಾಲೆಯಲ್ಲಿ ಮೀಸಲಾತಿ ನೀಡಲಾಗುತ್ತಿದೆ. ಇತರ ಹುದ್ದೆಗಳಲ್ಲೂ ಆದ್ಯತೆ ನೀಡುವ ಚಿಂತನೆ ಇದೆ. ಕಡತವನ್ನು ಮಂಡಿಸಲು ಈಗಾಗಲೇ ಟಿಪ್ಪಣಿ ಕೊಡಲಾಗಿದೆ. ಈ ಯೋಜನೆಯನ್ನು ಜಾರಿ ಮಾಡುತ್ತೇವೆ. ವಾರ್ಡನ್ ಹುದ್ದೆಯಲ್ಲೂ ಅಗ್ನಿ ವೀರರಿಗೆ ಅವಕಾಶವಿದೆ. ಸುಶಿಕ್ಷಿತ ಅಗ್ನಿ ವೀರರಿಗೆ ಸೂಕ್ತ ಹುದ್ದೆ ನೀಡಲು ಚಿಂತಿಸಲಾಗಿದೆ. ಅಗ್ನಿ ವೀರರನ್ನು ನೇಮಿಸಿಕೊಳ್ಳಲು ನಮಗೆ ಹೆಮ್ಮೆ ಇದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 

Comments are closed.