ಕರಾವಳಿ

ಕಾಸರಗೋಡು: ಗಲ್ಫ್ ಉದ್ಯೋಗಿ ಕೊಲೆ ಪ್ರಕರಣದಲ್ಲಿ ಮತ್ತೆ ಮೂವರ ಬಂಧನ

Pinterest LinkedIn Tumblr

ಕಾಸರಗೋಡು: ಗಲ್ಫ್ ಉದ್ಯೋಗಿ ಸೀತಾಂಗೋಳಿ ಮುಗುವಿನ ಅಬೂಬಕ್ಕರ್ ಸಿದ್ದಿಕ್ ( 32) ನ ಕೊಲೆಗೆ ಸಂಬಂಧಪಟ್ಟಂತೆ ಮೂವರನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು ಈವರೆಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

ಬಂಧಿತರನ್ನು ಮಂಜೇಶ್ವರ ಉದ್ಯಾವರದ ರಿಯಾಜ್ ಹಸನ್ ( 33) , ಉಪ್ಪಳ ಬಿ. ಟಿ ರಸ್ತೆಯ ಅಬ್ದುಲ್ ರಜಾಕ್ ( 46) ಮತ್ತು ಕುಂಜತ್ತೂರಿನ ಅಬೂಬಕ್ಕರ್ ಸಿದ್ದಿಕ್ ( 33) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರದ ಅಬ್ದುಲ್ ರಹೀಮ್ ಮತ್ತು ಅಬ್ದುಲ್ ಅಝೀಜ್ ನನ್ನು ಈ ಹಿಂದೆ ಬಂಧಿಸಲಾಗಿತ್ತು.

ಜೂನ್ 29 ರಂದು ಅಬೂಬಕ್ಕರ್ ಸಿದ್ದಿಕ್ ನನ್ನು ತಂಡವು ಅಪಹರಿಸಿ ಪೈವಳಿಕೆಯ ಮನೆಯೊಂದರಲ್ಲಿ ದಿಗ್ಬಂಧನದಲ್ಲಿರಿಸಿ ಥಳಿಸಿ ಕೊಲೆಗೈಯ್ಯಲಾಗಿತ್ತು. ಬಳಿಕ ಕಾರೊಂದರಲ್ಲಿ ಬಂದ್ಯೋಡಿನ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ತೊರೆದು ತಂಡವು ಪರಾರಿಯಾಗಿತ್ತು.

ಕೃತ್ಯದಲ್ಲಿ ಶಾಮೀಲಾಗಿರುವ ಇನ್ನೂ ಐದಕ್ಕೂ ಅಧಿಕ ಮಂದಿ ತಲೆಮರೆಸಿಕೊಂಡಿದ್ದು , ಇವರಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.