ಹಿಮಾಚಲ ಪ್ರದೇಶ: ಸೈಂಜ್ ಕಣಿವೆಯ ನ್ಯೂಲಿ-ಶಂಶಾರ್ ರಸ್ತೆಯಲ್ಲಿ ಕುಲು-ಸೈಂಜ್ ಬಳಿ ಸೋಮವಾರ ಬೆಳಗ್ಗೆ ಶಾಲಾ ಬಸ್ಸು ಹೋಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ. ದುರ್ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ನಡೆದಿದೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಲಾ ಬಸ್ಸಿನಲ್ಲಿ 45 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕುಲ್ಲುವಿನಿಂದ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾದಲ್ಲಿ ತೊಡಗಿದೆ ಎಂದು ಕುಲ್ಲು ಜಿಲ್ಲಾಧಿಕಾರಿ ಆಶುತೋಷ್ ಗಾರ್ಗ್ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಕುಲ್ಲುವಿನ ಸೈಂಜ್ ಕಣಿವೆಯಲ್ಲಿ ಖಾಸಗಿ ಬಸ್ಸು ಅಪಘಾತವಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ತಂಡ ಧಾವಿಸಿದ್ದು ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಕುಟುಂಬಕ್ಕೆ ಸಂತಾಪಗಳು. ದೇವರು ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ.
Comments are closed.