ಕರ್ನಾಟಕ

‘ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ’: ಸಿದ್ಧರಾಮಯ್ಯ ಟ್ವೀಟ್

Pinterest LinkedIn Tumblr

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಬಂಧನದ ಬೆನ್ನಲ್ಲೇ ಗ್ರಹ ಸಚಿವರ ರಾಜಿನಾಮೆಗೆ ಆಗ್ರಹಿಸಿ‌ ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

”ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

”ಈ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಮುಖ್ಯಮಂತ್ರಿಗಳು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

Comments are closed.