ಬೆಂಗಳೂರು: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಮೈಕ್ರೋ ಲ್ಯಾಬ್ಸ್ ನೂರಾರು ಕೋಟಿಯ ಡೋಲೋ -650 ಮಾತ್ರೆ ಮಾರಾಟ ಮಾಡುವ ಮೂಲಕ ಅತೀ ಹೆಚ್ಚು ವ್ಯಾಪಾರ ವಹಿವಾಟು ನಡೆಸಿತ್ತು. ಆ ವೇಳೆ ತೆರಿಗೆ ವಂಚಿಸಿದ್ದ ಆರೋಪ ಹಿನ್ನೆಲೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮೈಕ್ರೋ ಲ್ಯಾಬ್ಸ್ ಕೇಂದ್ರ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಚೇರಿ ಅಲ್ಲದೇ ಸಿಎಂಡಿ ದಿಲೀಪ್ ಸುರಾನಾ, ಡೈರೆಕ್ಟರ್ ಆನಂದ್ ಸುರಾನ ನಿವಾಸದ ಮೇಲೂ ದಾಳಿ ನಡೆಸಲಾಗಿದೆ. ಮೈಕ್ರೋ ಲ್ಯಾಬ್ಸ್ ಫಾರ್ಮಾಸಿಟಿಕಲ್ನ ಬೆಂಗಳೂರಿನ ಕೇಂದ್ರ ಕಚೇರಿ ಜೊತೆಗೆ ತಮಿಳುನಾಡು, ಗೋವಾ, ಪಂಜಾಬ್, ಮುಂಬೈ, ದೆಹಲಿ, ಸಿಕ್ಕಿಂ ಸೇರಿದಂತೆ ದೇಶದ 40 ಕಡೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗ್ಗೆ 7 ಗಂಟೆಯಿಂದಲೇ 25ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
Comments are closed.