ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆಯಿಂದಲೇ ಭಾರೀ ಮಳೆ ಮುಂದುವರಿದಿದೆ. ಜುಲೈ 8 ಮತ್ತು9 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎರಡು ದಿನ (ಶುಕ್ರವಾರ, ಶನಿವಾರ) ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಶುಕ್ರವಾರ ಮತ್ತು ಶನಿವಾರ ಜಿಲ್ಲಾಧಿಕಾರಿ ಕೂರ್ಮ ರಾವ್ ರಜೆಯನ್ನು ಘೋಷಿಸಿದ್ದಾರೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಆಯಾಯ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿದ್ದು ಮುಂಜಾಗರುಕ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.
Comments are closed.