International

ಭಾಷಣ ಮಾಡುತ್ತಿರುವಾಗಲೇ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ

Pinterest LinkedIn Tumblr

ಟೋಕಿಯೊ: ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (67) ಅವರ ಮೇಲೆ ಶುಕ್ರವಾರ ಭೀಕರ ಗುಂಡಿನ ದಾಳಿಯಾಗಿದೆ.

ಜಪಾನ್ ನ ನಾರಾ ಸಿಟಿಯಲ್ಲಿ ಜಪಾನ್ ನ ಕಾಲಮಾನ ಬೆಳಗ್ಗೆ 11.30ರ ಸುಮಾರಿಗೆ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎಂದು ವರದಿಯಾಗಿದೆ.

ತೀವ್ರ ರಕ್ತಸ್ರಾವವಾಗಿ ಕುಸಿದ ಸ್ಥಳದಲ್ಲಿಯೇ ಕುಸಿದುಬಿದ್ದ ಶಿಂಜೊ ಅಬೆಯವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಜುಲೈ 10ರಂದು ಜಪಾನ್ ಸಂಸತ್ತಿನ ಮೇಲ್ಮನೆಗೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆ ಶಿಂಜೊ ಅಬೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು ಎಂದು ತಿಳಿದುಬಂದಿದೆ.

Comments are closed.