(ವರದಿ- ಯೋಗೀಶ್ ಕುಂಭಾಸಿ)
ಕುಂದಾಪುರ: ಉತ್ತರಕನ್ನಡ ಜಿಲ್ಲೆ ಹೊನ್ನಾವರದಿಂದ ರೋಗಿಯನ್ನು ಹಾಗೂ ಅವರ ಕುಟುಂಬಿಕರನ್ನು ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೈನ್ಸ್ ಚಾಲಕನ ನಿಯಂತ್ರಣ ತಪ್ಪಿ ಶಿರೂರು ಟೋಲ್ ಫ್ಲಾಜಾ ಬಳಿ ಪಲ್ಟಿಯಾದ ಘಟನೆ ಬುಧವಾರ ಸಂಜೆ ನಡೆದಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಅಂಬುಲೆನ್ಸ್ ಚಾಲಕ ಸಹಿತ ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಹೊನ್ನಾವರ ತಾಲೂಕಿನ ಹಡಿನಬಾಳ ಹಾಡಗೇರಿ ನಿವಾಸಿಗಳಾದ ಲೋಕೇಶ್ ಮಾಧವ ನಾಯ್ಕ (38), ಜ್ಯೋತಿ ಲೋಕೇಶ್ ನಾಯ್ಕ (32), ಗಜಾನನ ಲಕ್ಷ್ಮಣ ನಾಯ್ಕ (36) ಹಾಗೂ ಮಂಜುನಾಥ ನಾಯ್ಕ (42) ಮೃತಪಟ್ಟಿದ್ದಾರೆ. ಗೀತಾ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಬುಲೆನ್ಸ್ ಚಾಲಕ ರೋಶನ್ ರೋಡಿಗ್ರಸ್, ಟೋಲ್ ಸಿಬ್ಬಂದಿ ಸಂಬಾಜಿ ಗೋಲ್ಪಾಡೆ, ಅಂಬುಲೆನ್ಸ್ ವಾಹನದಲ್ಲಿದ್ದ ಗಣೇಶ್ ನಾಯ್ಕ, ಶಶಾಂಕ್ ನಾಯ್ಕ ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಸಿರು ಚೆಲ್ಲಿದ ನಾಲ್ವರು..!
ಗಜಾನನ ನಾಯ್ಕ ಎನ್ನುವರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು ಹೊನ್ನಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದು ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕುಟುಂಬದವರು ಅಂಬುಲೆನ್ಸ್ ಮೂಲಕ ಕರೆತರುತ್ತಿದ್ದರು. ಈ ವೇಳೆ ಟೋಲ್ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ಟೋಲ್ ಸಂಗ್ರಹಾ ಕೊಠಡಿ, ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಟೋಲ್ ಕೇಂದ್ರ ಬಳಿ ಹೆದ್ದಾರಿಯಲ್ಲಿ ಮಳೆ ನೀರು ನಿಂತಿದ್ದು ಅಲ್ಲಿ ಬರುವಾಗಲೇ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು ಹಾಗೂ ಟೋಲ್ ಸಂಗ್ರಹಾ ಕೊಠಡಿ ಬಳಿ ಹೆದ್ದಾರಿ ಮೇಲೆ ಜಾನುವಾರು ಮಲಗಿರುವುದು ಈ ಸಿಸಿ ಟಿವಿ ದೃಶ್ಯದಲ್ಲಿ ಕಂಡುಬರುತ್ತಿದ್ದು ಟೋಲ್ ಸಂಬಂದಪಟ್ಟವರ ಬೇಜಾವಬ್ದಾರಿ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿರಿ:
ಬೈಂದೂರಿನ ಶಿರೂರು ಟೋಲ್ ಫ್ಲಾಜಾದಲ್ಲಿ ಅಂಬುಲೆನ್ಸ್ ಪಲ್ಟಿ; ಮೂವರು ದಾರುಣ ಮೃತ್ಯು, ಓರ್ವ ಗಂಭೀರ( Video)
Comments are closed.