ಕರಾವಳಿ

ಉಪ್ಪುಂದ: ಲಾಡ್ಜ್ ನಲ್ಲಿ ಅನ್ಯ ಕೋಮಿನ ಪುರುಷನೊಂದಿಗೆ ಯುವತಿ ಪತ್ತೆ

Pinterest LinkedIn Tumblr

ಉಡುಪಿ:  ಬೈಂದೂರು ತಾಲೂಕಿನ ಉಪ್ಪುಂದ ನಂದನವನ ವಸತಿ ಗೃಹಕ್ಕೆ ಭಿನ್ನಮತೀಯ ಜೋಡಿಗಳು ಬಂದ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಉಳ್ಳಾಲದ ಉಳ್ಳಾಲ ಬೈಲು ನಿವಾಸಿ ಅಮೀರ್ ಅಲಿ(45), ಉಳ್ಳಾಲದ 28 ವರ್ಷದ ಯುವತಿಯೊಂದಿಗೆ ಆಗಮಿಸಿದ್ದರು ಎಂದು ಮಾಹಿತಿ ತಿಳಿದುಬಂದಿದೆ.

ಅಮೀರ್ ಅಲಿ ದ.ಕ ಜಿಲ್ಲೆಯ ತೊಕ್ಕುಟ್ಟುವಿನಲ್ಲಿ ಗುಜರಿ ಅಂಗಡಿ ಇಟ್ಟುಕೊಂಡಿದ್ದಾನೆ. ಯುವತಿ ಆತನ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಆಕೆಯ ಒಪ್ಪಿಗೆಯಿಂದಲೇ ಲಾಡ್ಜ್ ಗೆ ಕರೆತಂದಿರುವುದಾಗಿ ತಿಳಿದುಬಂದಿದೆ.

ಬೈಂದೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.

 

Comments are closed.