ಕರಾವಳಿ

ಭಾರೀ ಮಳೆಗೆ ಮಂಗಳೂರಿನ ಹಲವು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Pinterest LinkedIn Tumblr

ಮಂಗಳೂರು: ತಡರಾತ್ರಿಯಿಂದ ಗುಡುಗು ಸಹಿತ ಮಳೆ ಸುರಿದ ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆಯಿಂದ ಜಲಾವೃತಗೊಂಡಿದೆ.

ಹಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಕರಂಗಲ್ಪಾಡಿ, ಮಂಗಳೂರು ರೈಲ್ವೆ ನಿಲ್ದಾಣ , ಪಂಪ್ ವೆಲ್ , ಅತ್ತಾವರ ಹೀಗೆ ಹಲವು ಪ್ರದೇಶದಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ.

ಜು.30ರ ಮುಂಜಾನೆಯಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.

Comments are closed.