ಕರಾವಳಿ

ವಿದ್ಯುತ್ ತಂತಿ ತಗುಲಿ ನಾಲ್ಕು ಜಾನುವಾರುಗಳು ಮೃತ್ಯು: ಮೆಸ್ಕಾಂ ವಿರುದ್ಧ ಸ್ಥಳೀಯರ ಆಕ್ರೋಷ

Pinterest LinkedIn Tumblr

ಕುಂದಾಪುರ: ಗದ್ದೆಯಲ್ಲಿ ಮೇಯುತ್ತಿದ್ದ ನಾಲ್ಕು ಜಾನುವಾರುಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.

ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಂತಿಗಳು ತೀರಾ ಹಳೆಯದಾಗಿದ್ದು, ಇದರಿಂದ ಹಸುಗಳು ಸಾವನ್ನಪ್ಪಿರಬಹುದು ಎಂದು ಗ್ರಾಮಸ್ಥರು ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಹಳೆಯ ವಿದ್ಯುತ್ ತಂತಿಗಳನ್ನು ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ.

Comments are closed.