ಕರಾವಳಿ

ಇಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: 3,800 ಕೋಟಿಯ ಒಟ್ಟು 8 ವಿವಿಧ ಯೋಜನೆಗಳ ಲೋಕಾರ್ಪಣೆ, ಶಿಲಾನ್ಯಾಸ

Pinterest LinkedIn Tumblr

ಮಂಗಳೂರು: ಕರಾವಳಿ ಭಾಗಕ್ಕೆ ಕೇಂದ್ರ ಸರ್ಕಾರದಿಂದ ನಾನಾ ಹೊಸ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನ ಕುಳೂರು ಗೋಲ್ಡ್​​ ಫಿಂಚ್ ಸಿಟಿಯಲ್ಲಿ ಇಂದು (ಸೆಪ್ಟೆಂಬರ್ 2) ನೆರವೇರಿಸಲಿದ್ದಾರೆ.

ಪ್ರಧಾನಿಯವರು ಅಪರಾಹ್ನ 1 ಗಂಟೆಗೆ ಕೊಚ್ಚಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ರಾಜ್ಯಪಾಲರು, ಮುಖ್ಯಮಂತ್ರಿ ಯವರು ಬರಮಾಡಿಕೊಳ್ಳುವರು. ಬಳಿಕ ಹೆಲಿಕಾಪ್ಟರ್‌ ಮೂಲಕ ಎನ್‌ಎಂ ಪಿಎಗೆ ಬಂದು, ಅಲ್ಲಿಂದರಸ್ತೆ ಮಾರ್ಗವಾಗಿ ಸಮಾವೇಶ ಸ್ಥಳಕ್ಕೆ ಆಗಮಿಸುವರು. ಸಭಾಂಗಣದ ವೇದಿಕೆಯಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮೋದಿ ಸಮಾವೇಶವನ್ನುದ್ದೇಶಿಸಿ ಮಾತನಾಡುವರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೂ. 3,800 ಕೋಟಿ ಮೊತ್ತದ ಒಟ್ಟು 8 ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವರಾದ ಸರ್ಬಾನಂದ್ ಸೊನೊವಾಲ್, ಕೇಂದ್ರ ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೊ ನಾಯಕ್, ಕೇಂದ್ರ ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶಂತನು ಠಾಕೂರ್ ಸೇರಿದಂತೆ ರಾಜ್ಯದ ಸಚಿವರು ಸಹ ಭಾಗವಹಿಸಲಿದ್ದು ಕಾರ್ಯಕ್ರಮವನ್ನು ಡಿಡಿ ನ್ಯೂಸ್‍ನಲ್ಲಿ ನೇರ ಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.

Comments are closed.