ಕರಾವಳಿ

ಬೈಂದೂರು ರಾಷ್ಟ್ರೀಯ ಹೆದ್ದಾರಿ 5 ಕಡೆ ಅಂಡರ್ ಪಾಸ್, ಮರವಂತೆ ಬಳಿ ರಸ್ತೆ ಸುರಕ್ಷತೆ; ಎನ್.ಎಚ್.ಎ.ಐ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Pinterest LinkedIn Tumblr

ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರ ತಲ್ಲೂರು, ಹೆಮ್ಮಾಡಿ, ತ್ರಾಸಿ, ಯಡ್ತರೆ ಬೈಪಾಸ್, ಬೈಂದೂರು ತಾಲೂಕು ಕಛೇರಿ ಬಳಿ ಅಂಡರ್ ಪಾಸ್ ನಿರ್ಮಿಸುವಂತೆ ಹಾಗೂ ಮರವಂತೆ ಬೀಚ್ ಬಳಿ ರಸ್ತೆ ಸುರಕ್ಷತೆ ಹಾಗೂ ಸುಂದರೀಕರಣ ಮಾಡಲು ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ದೆಹಲಿಯಿಂದ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್.ಎಚ್.ಎ.ಐ) ಚೀಫ್ ಜನರಲ್ ಮ್ಯಾನೇಜರ್ ವಿಶಾಲ್ ಗುಪ್ತಾ ಅವರು ಬೈಂದೂರು ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು.

ಅವರೊಂದಿಗೆ ಸ್ಥಳೀಯರಾದ ಉದ್ಯಮಿ ವೆಂಕಟೇಶ್ ಕಿಣಿ, ಮಂಗಳೂರು ವಿಭಾಗದ ಪಿ.ಡಿ ಲಿಂಗೇಗೌಡ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.