ಬೆಂಗಳೂರು: ಅರಣ್ಯ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದ್ದರ ಬಗ್ಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಕತ್ತಿಯವರು ನಿಧನರಾಗಿದ್ದಾರೆ. ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಒಳ್ಳೆಯ ಸ್ನೇಹಿತ ಎಂದು ಹೇಳಿದರು. ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಅವರು ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು. ಮೂರು ದಿನ ಘೋಷಿಸಬಹುದಿತ್ತು. ಸರ್ಕಾರ ಯಾಕೆ ಘೋಷಿಸಿಲ್ಲವೋ ಗೊತ್ತಿಲ್ಲ. ನಾನು ಅದರ ಬಗ್ಗೆ ಮಾತನಾಡೊಲ್ಲ ಎಂದು ವಾಗ್ದಾಳಿ ನಡೆಸಿದರು.
ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ರಾಜ್ಯಾದ್ಯಂತ ಇಂದು ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದೆ. ಕತ್ತಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತಿದೆ ಎಂದು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
Comments are closed.