ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟ ಉದ್ಘಾಟನಾ ಸಮಾರಂಭ ಶುಕ್ರವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ದೈಹಿಕ ಮಾತ್ರವಲ್ಲದೆ ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ಸಹಕಾರಿ. ಆಟೋಟದಲ್ಲಿ ಸೋಲು ಮುಂದಿನ ಗೆಲುವಿಗೆ ದಾರಿ ದೀಪವಾಗುತ್ತೆ. ಸೋಲು ಗೆಲುವನ್ನು ಸಮಪ್ರಮಾಣದಲ್ಲಿ ಸ್ವೀಕರಿಸಿದಾಗ ಅದು ಕ್ರೀಡಾ ಮನೋಭಾವನೆ ಎನಿಸಿಕೊಳ್ಳುತ್ತದೆ ಇಂಥ ಕ್ರೀಡಾ ಮನೋಭಾವನೆಯನ್ನು ಎಲ್ಲ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಎಲ್ಲ ವಲಯದ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು ಹಾಗೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಘುನಾಥ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಪ್ರಭಾಕರ್ ಜೈನ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಯುವಜನಾ ಸೇವಾ ಮತ್ತು ಸಬಲೀಕರಣ ಇಲಾಖೆಯ ಕುಸುಮಾಕರ ಶೆಟ್ಟಿ, ಕುಂದಾಪುರ ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಫ್ರೌಢಶಾಲಾ ಶಿಕ್ಷಕರ ಸಂಘದ ಉದಯ ಕುಮಾರ್ ಶೆಟ್ಟಿ, ಆರ್.ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ಶೆಟ್ಟಿ, ಕುಂದಾಪುರ ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ, ಹಳೆವಿದ್ಯಾರ್ಥಿ ಸಂಘದ ಸದಸ್ಯರಾದ ಅನಂತಕೃಷ್ಣ ಕೊಡ್ಗಿ, ನಾರಾಯಣ, ಕುಂದೇಶ್ವರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ನರಸಿಂಹ ಹೊಳ್ಳ, ಕುಂದಾಪುರ, ಬೈಂದೂರು, ಉಡುಪಿ (ಬ್ರಹ್ಮಾವರ), ಕಾರ್ಕಳ ತಾಲೂಕಿನ ದೈ.ಶಿ. ಪರಿವೀಕ್ಷಣಾಧಿಕಾರಿಗಳಾದ ದತ್ತಾ ನಾಯಕ್, ಚಂದ್ರಶೇಖರ ಶೆಟ್ಟಿ, ಪದ್ಮಾವತಿ, ನಿವೃತ್ತ ದೈ.ಶಿ. ಶಿಕ್ಷಕರ ಸಂಘದ ಅಧ್ಯಕ್ಷ ಕಳತ್ತೂರು ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.
ಸಮಾರೋಪ..
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ವಿಭಾಗದ ಬಹುಮಾನಗಳ ಕೊಡುಗೆಯನ್ನು ನೀಡಿದ ಕೈಲಾಡಿ ಮೇಲ್ಮನೆ ಗಾನವಿ ಎಂಟರ್ ಪ್ರೈಸಸ್ ಮಾಲಕರಾದ ನಾಗರಾಜ್ ಶೆಟ್ಟಿ ಬಹುಮಾನ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಸಭೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.ಬೆಳಿಗ್ಗಿನ ಸಭಾ ಕಾರ್ಯಕ್ರಮದಲ್ಲಿ ಗಣೇಶ್ ಕಾಂಚನ್ ಸಂಜೆಯ ಸಮಾರೋಪ ಸಮಾರಂಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಉದಯ ಮಡಿವಾಳ ಎಂ ಕಾರ್ಯಕ್ರಮ ನಿರ್ವಹಿಸಿದರು. ಉಪಪ್ರಾಂಶುಪಾಲರಾದ ಕಿರಣ್ ಕುಮಾರ್ ಹೆಗ್ಡೆ ಅತಿಥಿಗಳನ್ನು ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು.
ಫಲಿತಾಂಶ
14 ರ ಬಾಲಕರ ವಿಭಾಗ
ಪ್ರಥಮ ಕಾರ್ಕಳ ವಲಯ
ದ್ವಿತೀಯ ಬೈಂದೂರು ವಲಯ
14 ರ ಬಾಲಕಿಯರ ವಿಭಾಗ
ಪ್ರಥಮ ಬೈಂದೂರು ವಲಯ
ದ್ವಿತೀಯ ಕಾರ್ಕಳ ವಲಯ
17 ರ ಬಾಲಕಿಯರ ವಿಭಾಗ
ಪ್ರಥಮ ಬೈಂದೂರು ವಲಯ
ದ್ವಿತೀಯ ಉಡುಪಿ ವಲಯ
17 ರ ಬಾಲಕರ ವಿಭಾಗ
ಪ್ರಥಮ ಉಡುಪಿ ವಲಯ
ದ್ವಿತೀಯ ಕುಂದಾಪುರ ವಲಯ
Comments are closed.