ಕರಾವಳಿ

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು; ಹುಡುಗ-ಹುಡುಗಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ

Pinterest LinkedIn Tumblr

ಕುಂದಾಪುರ: ಇತ್ತೀಚೆಗೆ ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ವತಿಯಿಂದ ನಡೆದ ಕುಂದಾಪುರ ತಾಲೂಕು ಕಬಡ್ಡಿ ಪಂದ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕುಂದಾಪುರ ಹುಡುಗರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಹಾಗೆಯೇ ಹುಡುಗಿಯರ ತಂಡವೂ ಕೂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಕಬಡ್ಡಿ ತಂಡದೊಂದಿಗೆ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ, ತಂಡದ ವ್ಯವಸ್ಥಾಪಕರಾದ ಕಾಳಾವರ ಉದಯ ಕುಮಾರ್ ಶೆಟ್ಟಿ, ಪೂರ್ಣಿಮಾ ಪಿ. ನಾಯಕ್, ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Comments are closed.