ನವದೆಹಲಿ: ದೇಶಾದ್ಯಂತ ಕಳೆದ 2 ವಾರಗಳ ಕಾಲ ಪಿಎಫ್ಐ ಸಂಘಟನೆ ಮೇಲೆ ದಾಳಿಗಳು ನಡೆದ ಬೆನ್ನಲ್ಲೇ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದೆ. ಯುಎಪಿಎ ಕಾಯ್ದೆಯಡಿ 5 ವರ್ಷಗಳ ಕಾಲ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ದೇಶಾದ್ಯಂತ ಬ್ಯಾನ್ ಮಾಡಿದೆ.
ದೇಶಾದ್ಯಂತ ಎನ್ಎಐ ನಿಂದ ನಡೆದ ಕಾರ್ಯಾಚರಣೆಯಲ್ಲಿ ಪಿಎಫ್ಐ ಸಂಘಟನೆಯ ನೂರಾರು ಪಿಎಫ್ಐ ನಾಯಕರು, ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ನರೇಂದ್ರ ಮೋದಿ ನೇತೃತ್ಬದ ಕೇಂದ್ರ ಸರ್ಕಾರ ಈ ನಿಷೇಧ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಅಂಗಸಂಸ್ಥೆಗಳನ್ನು ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಘೋಷಿಸುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ನಿಷೇಧ ಮಾಡಲಾಗುತ್ತಿದೆ.
Comments are closed.