ಕರಾವಳಿ

ಅಪಘಾತದಿಂದ ಪಾದಚಾರಿ ಮಹಿಳೆ ಮೃತ್ಯು; ಆರೋಪಿಗೆ ಎರಡೂವರೆ ಜೈಲು ಶಿಕ್ಷೆ ವಿಧಿಸಿದ ಉಡುಪಿ ಕೋರ್ಟ್

Pinterest LinkedIn Tumblr

ಉಡುಪಿ: ಅತೀ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2019 ಜನವರಿ 26 ರಂದು 8.30 ರ ಸುಮಾರಿಗೆ ಅಲೆವೂರು ಗ್ರಾಮದ ಬೋಜ ಎಂಬಾತನು ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಮುಚ್ಲಿಕೋಡು ದೇವಸ್ಥಾನದ ದ್ವಾರದ ಬಳಿ‌ದ್ವಿಚಕ್ರ ವಾಹನವನ್ನು ದುಡುಕುತನ ಹಾಗೂ ಅಜಾಗರೂಕರೆಯಿಂದ ರಸ್ತೆಯ ತೀರಾ ಎಡ ಬದಿಗೆ ಚಲಾಯಿಸಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಜಯಲಕ್ಷ್ಮಿ ಉಮಾನಾಥ ಮಂಜ ಎಂಬ ಮಹಿಳೆಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯು ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್‌ ಅವರು ಆರೋಪಿ ಬೋಜ ಎಂಬಾತನಿಗೆ 2 ವರ್ಷ 6 ತಿಂಗಳುಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 10000ರೂಪಾಯಿ ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದಾರೆ.

 

Comments are closed.