ಕರಾವಳಿ

ಹೃದಯಾಘಾತದಿಂದ 13 ವರ್ಷದ ವಿದ್ಯಾರ್ಥಿನಿ ಮೃತ್ಯು; ನೇತ್ರದಾನ ಮಾಡಿದ ಪೋಷಕರು

Pinterest LinkedIn Tumblr

ಕುಂದಾಪುರ: 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ನಡೆದಿದೆ.

ಬಾಲಕಿಯನ್ನು ಅನುಶ್ರೀ ಎಂದು ಗುರುತಿಸಲಾಗಿದ್ದು, ಈಕೆ ಅರುಣ್ ಕುಮಾರ್ ಶೆಟ್ಟಿ ಮತ್ತು ಭಾರತಿ ದಂಪತಿಯ ಪುತ್ರಿ. ತಂದೆ ಅರುಣ್ ಕುಮಾರ್ ಶೆಟ್ಟಿ ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು ತಾಯಿ ಭಾರತಿ ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಾಳೆ‌. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ವರದಿ ನಿರೀಕ್ಷಿಸಲಾಗುತ್ತಿದೆ.

ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.

ಅನುಶ್ರೀ ಅವರ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿ ಅವರ ತಾಯಿಯ ಮನೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.

 

Comments are closed.