ಹೊನ್ನಾಳಿ: ಬಿಜೆಪಿ ಶಾಸಕ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು ಹುಡುಕಾಟ ಮುಂದುವರೆದಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ.
ಇಡೀ ಕುಟುಂಬಕ್ಕೆ ಆಘಾತವಾಗಿದ್ದು,ಶಾಸಕ ರೇಣುಕಾಚಾರ್ಯ ಅಣ್ಣನ ಮಗನ ಹುಡುಕಾಟದಲ್ಲಿದ್ದಾರೆ. ಕಳೆದ ಭಾನುವಾರ ಶಿವಮೊಗ್ಗದ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು, ಶಿವಮೊಗ್ಗದಲ್ಲಿ ಸ್ನೇಹಿತರನ್ನು ಮಾತನಾಡಿಸಿ ಸ್ವಲ್ಪ ಕಾಲ ಅವರ ಜೊತೆ ಕಾಲ ಕಳೆದು ಹೊನ್ನಾಳಿಗೆ ಹಿಂದಿರುಗಿದ್ದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಿನ್ನೆ ಫೋನ್ ಸ್ವಿಚ್ಛ್ ಆಫ್ ಆಗಿದ್ದು, ಕುಟುಂಬಸ್ಥರಲ್ಲಿ ಭಯವನ್ನುಂಟು ಮಾಡಿದೆ. ಹೊನ್ನಾಳಿ ಪೊಲೀಸರು ಹಾಗೂ ಚಂದ್ರು ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ದು, ರೇಣುಕಾಚಾರ್ಯ ಅವರ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.
ಎಸ್ಪಿ, ಡಿವೈಎಸ್ಪಿ ಮಾರ್ಗದಶರ್ನದಲ್ಲಿ ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸಲಾಗುತ್ತಿದೆ. ಸಿ.ಸಿ.ಟಿವಿ ದೃಶ್ಯಾವಳಿಗಳು, ಟೋಲ್ ಗೇಟ್ಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Comments are closed.