ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಎನ್ಐಎ ನಗದು ಬಹುಮಾನ ಘೋಷಣೆ ಮಾಡಿದೆ.
ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 2 ಲಕ್ಷ ಬಹುಮಾನ ರೂ. ನಗದು ಬಹುಮಾನ ನೀಡುವವುದಾಗಿ ಎನ್‌ಐಎ ಪ್ರಕಟಣೆ ಹೊರಡಿಸಿದೆ.
ನಾಲ್ವರು ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ರೆ ಒಟ್ಟು 14 ಲಕ್ಷ ರೂ ನಗದು ಬಹುಮಾನ ನೀಡುವಾಗಿ ಎನ್ಐಎ ಘೋಷಿಸಿದ್ದು, ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 5 ಲಕ್ಷ ರೂ. ಬಹುಮಾನ ಮತ್ತು ಆರೋಪಿಗಳಾದ ಉಮರ್ ಫಾರೂಕ್ ಹಾಗೂ ಅಬೂಬಕರ್ ಸಿದ್ದಿಕ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಅವರನನ್ನು ಜುಲೈ 26 ರಂದು ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿ ಬಳಿಯೇ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿತ್ತು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಾದ ಶಿಯಾಬ್, ರಿಯಾಜ್ ಮತ್ತು ಬಶೀರ್ ಎನ್ನುವರನ್ನು ಪೊಲೀಸರು ಈ ಹಿಂದೆ ಕೇರಳದಲ್ಲಿ ಬಂಧಿಸಿದ್ದರು.
Comments are closed.