ದಾವಣಗೆರೆ: ಐದು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಕಾರಿನಲ್ಲಿ ನಾಲೆಯಲ್ಲಿ ಗುರುವಾರ ಪತ್ತೆಯಾಗಿದೆ.
ದಾವಣಗೆರೆಯ ಕಡದಕಟ್ಟೆ ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಕಾರಿನೊಳಕ್ಕೆ ಶವ ಪತ್ತೆಯಾಗಿದ್ದು, ಕಾರನ್ನು ಮೇಲೆತ್ತಿ ಪರಿಶೀಲಿಸಿದಾಗ ಕಾರಿನೊಳಗೆ ಮೃತದೇಹ ಪತ್ತೆಯಾಗಿತ್ತು. ಈ ಮೃತದೇಹ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರದ್ದೇ ಎಂದು ಎಂದು ಗುರುತಿಸಲಾಗಿದೆ.
ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರ ರಮೇಶ್ ಅವರ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಕಾರಿನಲ್ಲಿ ಚಂದ್ರಶೇಖರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಚಂದ್ರು ತೆಗೆದುಕೊಂಡು ಹೋಗಿದ್ದ KA 17 MA 2534 ನಂಬರಿನ ವೈಟ್ ಕ್ರೇಟಾ ಕಾರು ಭಾನುವಾರ ಮಧ್ಯರಾತ್ರಿ ಶಿವಮೊಗ್ಗದಿಂದ ಸುರಹೊನ್ನೆ ಬಳಿ ಸಂಚರಿಸಿದ್ದು ಬಳಿಕ ಕಾರು ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆ ಬಳಿ ಸಂಚರಿಸಿರುವ ಕುರುಹು ಪತ್ತೆಯಾಗಿತ್ತು. ಇದೀಗ ಕಾರು ಕಾಲುವೆಯಲ್ಲಿ ಪತ್ತೆಯಾಗಿದೆ.
Comments are closed.