ಕರಾವಳಿ

ಸುರತ್ಕಲ್ ಟೋಲ್ ವಿಲೀನ ಮಾಡಿರುವುದು ಅವೈಜ್ಞಾನಿಕ: ನಿತಿನ್ ಗಡ್ಕರಿಗೆ ಮನವಿ ನೀಡಿದ ಉಡುಪಿ ಶಾಸಕ ರಘುಪತಿ ಭಟ್

Pinterest LinkedIn Tumblr

ಉಡುಪಿ: ಸುರತ್ಕಲ್ ಟೋಲ್ ರದ್ದುಗೊಳಿಸಿ ಹೆಜಮಾಡಿ ಟೋಲ್ ಜೊತೆ ಶುಲ್ಕ ವಿಲೀನ ಮಾಡಿರುವುದು ಅವೈಜ್ಞಾನಿಕ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳು, ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಶಾಸಕ ರಘುಪತಿ ಭಟ್ ವಿನಂತಿಸಿದರು.

ಮನವಿ ಸ್ವೀಕರಿಸಿದ ಬಳಿಕ, ಸಚಿವ ನಿತಿನ್ ಗಡ್ಕರಿ ಅವರು ಈ ವಿಷಯದ ಕುರಿತಾಗಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಡಿ. 5 ರಂದು ಸಭೆ ನಡೆಸುವುದಾಗಿ ತಿಳಿಸಿದರು.

 

Comments are closed.