ಮಂಗಳೂರು: ತುಳು ಚಿತ್ರರಂಗ, ರಂಗಭೂಮಿಯ ಖ್ಯಾತ ಹಾಸ್ಯ ನಟ ಅರವಿಂದ ಬೋಳಾರ್ ಅವರು ಸೋಮವಾರ ಸಂಜೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಪಂಪ್ ವೆಲ್ ಬಳಿ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದು, ಅವರನ್ನು ತತ್ ಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾಲಿಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಇನ್ನಷ್ಟೇ ನಿರೀಕ್ಷಿಸಲಾಗುತ್ತಿದೆ.
Comments are closed.