ಕರ್ನಾಟಕ

ಭ್ರಷ್ಟಾಚಾರ ವಿರೋಧಿಸಿ ಮಾ.9ರಂದು ಕಾಂಗ್ರೆಸ್ ಕರೆಕೊಟ್ಟಿದ್ದ ಕರ್ನಾಟಕ ಬಂದ್ ರದ್ದು

Pinterest LinkedIn Tumblr

ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದು ಮಾಡಲಾಗಿದೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು.

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಅನಾನುಕೂಲವಾಗುವ ಹಿನ್ನೆಲೆ ಕಾಂಗ್ರೆಸ್ ನಾಯಕರು ಬಂದ್ ಹಿಂಪಡೆದಿದ್ದಾರೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಇನ್ನಿತರ ನಾಯಕರು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಪಿಯುಸಿ ಪರೀಕ್ಷೆ ಇರುವುದರಿಂದ ಬಂದ್ ವಾಪಸ್ ಪಡೆದುಕೊಳ್ಳಲು ತೀರ್ಮಾನಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪ್ರಕರಣವನ್ನು ಭಾರೀ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್​, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್​ಗೆ ಕರ್ನಾಟಕ ಕಾಂಗ್ರೆಸ್​ ಕರೆ ಕೊಟ್ಟಿತ್ತು. ಕಾಂಗ್ರೆಸ್‌ ಬಂದ್​ಗೆ ವಿರೋಧಗಳು ವ್ಯಕ್ತವಾಗಿದ್ದವು.

Comments are closed.