ಕರಾವಳಿ

‘ಆಪರೇಷನ್ ಸನ್ ಸೆಟ್’: ಉಡುಪಿ ಜಿಲ್ಲಾ ಪೊಲೀಸರಿಂದ ವಿಶೇಷ ಕಾರ್ಯಾಚರಣೆ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾ ಪೊಲಿಸ್ ವತಿಯಿಂದ ಆಪರೇಷನ್ ಸೂರ್ಯಾಸ್ತ (ಆಪರೇಶನ್ ಸನ್ ಸೆಟ್) ಹೆಸರಿನಲ್ಲಿ ಮಾ.18 ಶನಿವಾರ ವಿಶೇಷ ಕಾರ್ಯಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವಿಶೇಷ ಕಾರ್ಯಚರಣೆಯ ಅಂಗವಾಗಿ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯನ್ನೋಳಗೊಂಡ ವಿಶೇಷ ತಂಡಗಳನ್ನು ರಚಿಸಿ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಯಿತು. ಸಾರ್ವಜನಿಕ ಉಪದ್ರವ ಮಾಡುವ ವ್ಯಕ್ತಿಗಳ ವಿರುದ್ದ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣಗಳನ್ನು ದಾಖಲಿಸಲಾಯಿತು. ನಿಷೇದಿತ ಪ್ರದೇಶಗಳಲ್ಲಿ ತಂಬಾಕು ಹಾಗೂ ಅದರ ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಯಿತು ಅಲ್ಲದೇ ಅದರ ಜೊತೆಯಲ್ಲಿ ಇ-ಸಿಗರೇಟ್ ಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲು ಸಹ ದಾಳಿ ನಡೆಸಲಾಯಿತು.

ಈ ವಿಶೇಷ ಕಾರ್ಯಚರಣೆಯಿಂದಾಗಿ ಗಾಂಜಾ ಹಾಗೂ ಒಆಒಂ ಅನ್ನು ಸಣ್ಣ ಪ್ರಮಾಣದಲ್ಲಿ ಹೊಂದಿದ 03 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೇ ವಾಹನ ತಪಾಸಣೆ ವೇಳೆ 45 ಲೀಟರ್ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಫಿಂಗರ್ ಪ್ರಿಂಟ್ ಸ್ಕಾನರ್ಸ್ ಮುಖಾಂತರ ಹಳೆಯ ಕಳ್ಳತನ ಹಾಗೂ ಅದರ ಸಂಬಂಧಿತ ಪ್ರಕರಣಗಳಲ್ಲಿ ಭಾಗಿಯಾಗಿದ್ದ 60 ಮಂದಿ ಚಾಳಿಬಿದ್ದ ಆಸಾಮಿಗಳು(habitual offender)/ಆಪಾಧಿತರುಗಳನ್ನು ಪರಿಶೀಲಿಸಲಾಯಿತು.

ಸರಿಯಾಗಿ ದಾಖಲೆಗಳಿಲ್ಲದ, ನಕಲಿ ನಂಬರ್ ಪ್ಲೇಟ್, ನಂಬರ್ ಪ್ಲೇಟ್ ಇಲ್ಲದ, ಮದ್ಯಪಾನ ಸೇವಿಸಿ ವಾಹನ ಚಾಲನೆ ಮಾಡುತ್ತಿರುವ ವಾಹನ ಚಾಲಕರುಗಳನ್ನು ತಪಾಸಣೆ ನಡೆಸಿದರು. ಈ ವೇಳೆ ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡಿದ ಬಗ್ಗೆ 32 ಪ್ರಕರಣಗಳನ್ನು ದಾಖಲಿಸಲಾಗಿದೆ. ಅಲ್ಲದೇ ಕ್ರಮ ಬಧ್ಧವಾದ ನಂಬರ್ ಪ್ಲೇಟ್ ಹೊಂದಿರದ/ನಕಲಿ ನಂಬರ್ ಪ್ಲೇಟ್ ಹೊಂದಿದ 29 ವಾಹನಗಳನ್ನು ಸ್ವಾಧೀನ ಪಡಿಸಿಕೊಂಡರು.

ಒಟ್ಟು 258 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿಕೊಂಡು ರೂಪಾಯಿ 1,30,000/- ದಂಡದ ಮೊತ್ತವನ್ನು ಸಂಗ್ರಹಿಸಲಾಯಿತು. ಅದೇ ರೀತಿ 44 ನಿಷೇಧಿತ ಪ್ರದೇಶಗಳಲ್ಲಿ ತಂಬಾಕು ಹಾಗೂ ಅದಕ್ಕೆ ಸಂಬಂಧಪಟ್ಟ ಉತ್ಪನ್ನಗಳನ್ನು ಮಾರಾಟ ಮಾಡಿದ ಬಗ್ಗೆ 44 ಕೋಟ್ಪಾ (cofta) ಕಾಯ್ದೆ ಅಡಿ ಪ್ರಕರಣಗಳನ್ನು ದಾಖಲಿಸಲಾಯಿತು. ಅದೇ ರೀತಿ ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯಪಾನ ಮಾಡುತ್ತಿದ್ದ 17 ಮಂದಿ ವಿರುಧ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ 65 ಮಂದಿ ರೌಡಿ ಶೀಟರ್ಗಳನ್ನು ಅನಿರೀಕ್ಷಿತವಾಗಿ ತಪಾಸಣೆ ನಡೆಸಿ  ಅವರ ಕಾರ್ಯಚಟುವಟಿಕೆಗಳ ಬಗ್ಗೆ ನಿಗಾವಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಡುಪಿ ಜಿಲ್ಲೆಯ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಆತ್ಮ ವಿಶ್ವಾಸ ನಿರ್ಮಾಣ ಮಾಡವರೇ ಇಂತಹ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ತೀರ್ವ ನಿಗಾ ವಹಿಸಿ ಕಾನೂನಿನ ಪರಿಪಾಲನೆ ಮಾಡುವ ಸಲುವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು ಎಂದು ಎಸ್ಪಿ ಅಕ್ಷಯ್ ಎಂ. ಹಾಕೆ ತಿಳಿಸಿದ್ದಾರೆ.

Comments are closed.