ಮಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್ ಬಾವಾ ಅವರು ಕೈ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು , ಕಾಂಗ್ರೆಸ್ ಪಕ್ಷದ ಸರ್ವೆಯಲ್ಲಿ ನನ್ನ ಪರ ಮತವಿದ್ದರೂ ಅದನ್ನು ನಗಣ್ಯ ಮಾಡಿ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ನ್ನು ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ. ನನ್ನನ್ನು ವೈರಿಯಂತೆ ಕಾಡಿದ್ದಂತೆ ಎಂದು ಎಂದು ಆರೋಪಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನೊಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್ ಸೇರ್ಪಡೆಯಾಗುತ್ತಿದ್ದು ಜೆಡಿಎಸ್ನಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
Comments are closed.