ಉಡುಪಿ: ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಪ್ಯೆಕಿ ಖಾಲಿದ್ ತಲೆಮರೆಸಿಕೊಂಡಿದ್ದು, ಅಬ್ದುಲ್ ಸಲಾಮತ್, ಚಂದ್ರಹಾಸ ಎನ್ನುವರನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಬಂದ ಲಭ್ಯ ಮಾಹಿತಿ ಮೇರೆಗೆ ಶೋಧನಾ ವಾರೆಂಟ್ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಣಿಪಾಲ ಠಾಣಾ ಇನ್ಸ್ ಪೆಕ್ಟರ್ ದೇವರಾಜ್ ಟಿ.ವಿ ಅವರು ತಮ್ಮ ತಂಡದೊಂದಿಗೆ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ 4 ಮೊಬೈಲ್ ಫೋನ್, ರೂ 10000 ನಗದು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಟಿ, ಡಿವೈಎಸ್ಪಿ ದಿನಕರ ಕೆ.ಪಿ ನಿರ್ದೇಶನದಂತೆ ಬ್ರಹ್ಮಾವರ ಸಿ.ಪಿ.ಐ ದಿವಾಕರ್ ಹಾಗೂ ಮಣಿಪಾಲ ಇನ್ಸ್‌ಪೆಕ್ಟರ್ ದೇವರಾಜ ಟಿ.ವಿ ನೇತೃತ್ವದಲ್ಲಿ ಪಿಎಸ್ಐ ಅಬ್ದುಲ್ ಖಾದರ್, ಸಿಬ್ಬಂದಿಗಳಾದ ಸುಕುಮಾರ್ ಶೆಟ್ಟಿ, ಇಮ್ರಾನ್, ಸುರೇಶ್ ಕುಮಾರ್, ಜ್ಯೋತಿ ನಾಯಕ್, ಅರುಣ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.