ಕುಂದಾಪುರ: ಪ್ರವಾಸಕ್ಕೆಂದು ಸ್ನೇಹಿತನೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿಬಿದ್ದು ಕೊಚ್ಚಿಹೋದ ಘಟನೆ ಕೊಲ್ಲೂರು ಸನೀಪದ ಅರಶಿನ ಗುಂಡಿ ಜಲಪಾತದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ (23) ನೀರುಪಾಲಾದ ಯುವಕ.
ಭಾನುವಾರದಂದು ಶರತ್ ಆತನ ಸ್ನೇಹಿತ ಗುರುರಾಜ ಎನ್ನುವರೊಂದಿಗೆ ಕಾರಿನಲ್ಲಿ ಭದ್ರಾವತಿಯಿಂದ ಹೊರಟು ಕೊಲ್ಲೂರಿಗೆ ಆಗಮಿಸಿ ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ (ಫಾಲ್ಸ್) ನೋಡಲು ಹೋಗಿದ್ದು ಮಧ್ಯಾಹ್ನ 3:30ರ ಸುಮಾರಿಗೆ ಜಲಪಾತ ಬಳಿ ಬಂಡೆಯ ಮೇಲೆ ನಿಂತಿದ್ದ ಶರತ್ ಆಕಸ್ಮಿಕವಾಗಿ ಕಾಲು ಜಾರಿ ಆಯತಪ್ಪಿ ಸೌಪರ್ಣಿಕ ನದಿ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಶರತ ಅವರ ಪತ್ತೆಗೆ ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಯುವಕ ಶರತ್ ಕಾಲು ಜಾರಿ ಬೀಳುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.