ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ‘ನಾದಬ್ರಹ್ಮ’ ಖ್ಯಾತಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಬಾರಿ ಕೂಡ ಮೈಸೂರು ದಸರಾವನ್ನು ಸಾಂಪ್ರದಾಯಿಕಬದ್ಧವಾಗಿ ಆಚರಿಸಲಾಗುವುದು ಎಂದರು.
ದಸಾರ ಅಕ್ಟೋಬರ್ 15 ರ ಬೆಳಿಗ್ಗೆ 10.15 ರಿಂದ 10.30ಕ್ಕೆ ಸಲ್ಲುವ ಮಹೂರ್ತದಲ್ಲಿ ಮೈಸೂರು ದಸರಾ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಗಿದೆ.
ಅಲ್ಲದೇ ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಲಿದೆ.
Comments are closed.