ಕರಾವಳಿ

ರಾಜ್ಯದಲ್ಲಿ ಮಳೆ ಕ್ಷೀಣ: 161 ತೀವ್ರ, 34 ಸಾಧಾರಣ ಬರ ಬರ ಪೀಡಿತ ತಾಲೂಕುಗಳನ್ನು ಘೋಷಿಸಿದ ಸರ್ಕಾರ

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತೀವ್ರವಾಗಿ ಮಳೆ ಕೊರತೆ ಉಂಟಾಗಿದ್ದು, ಬರ ತಾಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 161 ತಾಲೂಕುಗಳು ತೀವ್ರ, 34 ತಾಲೂಕುಗಳು ಸಾಧಾರಣ ಬರ ಪೀಡಿತ ಪ್ರದೇಶಗಳೆಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಸಚಿವ ಸಂಪುಟ ಉಪಸಮಿತಿ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಿತ್ತು.

ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

 

 

Comments are closed.