ಉಡುಪಿ: ಪರವಾನಿಗೆ ಸಮಸ್ಯೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ ನಡೆಸಲು ನಿರ್ಧರಿಸಿವೆ.
ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಎಸ್ಪಿ ಡಾ. ಅರುಣ್ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಕೂಡ ಸಮಸ್ಯೆ ಬಗೆಹರಿದಿಲ್ಲ ಎನ್ನಲಾಗಿದೆ.
ಹೀಗಾಗಿ ಒಕ್ಕೂಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿದ್ದು ಅ.3ರಂದು ಬಂದ್ಗೆ ಕರೆ ನೀಡಿದ್ದಾರೆ. ಬಂದ್ ಬಗ್ಗೆ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಸಂಘಟನೆಯ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.
Comments are closed.