ಕರಾವಳಿ

ಉಡುಪಿಯ ತನ್ನ ಮನೆಯಿಂದ ಯುವತಿ ನಾಪತ್ತೆ

Pinterest LinkedIn Tumblr

ಉಡುಪಿ: ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ

Comments are closed.