ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.
ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಪರಾರಿಯಾಗಿದ್ದು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದ. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದ.
ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಮಿದಲು ಕೂಡ ಪ್ರತಿಮಾ ಅಲ್ಲಲ್ಲಿ ದಿಡೀರ್ ದಾಳಿ ನಡೆಸುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ಎಚ್ಚರಿಕೆ ಕೂಡ ನೀಡಿದ್ದರು.
ಕೊಲೆ ದಿನವೂ ಪ್ರತಿಮಾ ಅವರ ಕಾಲಿಗೆ ಬಿದ್ದು ಕೆಲಸಕ್ಕೆ ಮತ್ತೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದ. ಆದರೆ ಅವರು ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಪರಾರಿಯಾಗಿದ್ದ.
ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾರುಪಡಿಸಿ ಹತ್ತು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
Comments are closed.