ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮ್ಮದ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದು, ಆತನ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.
ಉಡುಪಿ ನೇಜಾರಿನ ನಾಲ್ವರ ಕೊಲೆ ಪ್ರಕರಣ ಸಂಬಂಧ ಹಫೀಜ್ ಮೊಹಮದ್ ಎಂಬಾತ ತನ್ನ ಫೇಸ್ಬುಕ್ ಖಾತೆಯಲ್ಲಿ ಪ್ರಚೋದನಾಕಾರಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಾನೆ. ‘ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು’ ಎಂದು ಘಟನೆ ಉಲ್ಲೇಖಿಸಿ ಪೋಸ್ಟ್ ಹಾಕಿದ್ದಾನೆ.
ಹಫೀಜ್ ಮೊಹಮದ್ ವಿರುದ್ದ ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಸಂಬಂಧ ಪೋಸ್ಟ್ ಹಾಕಿದ್ದಕ್ಕಾಗಿ ಐಪಿಸಿ 155, 505(2) ಕಾಯ್ದೆಯಡಿ ಸುಮೋಟೊ ಕೇಸ್ ದಾಖಲಿಸಿ ಪ್ರಕರಣ ದಾಖಲಾಗಿದೆ.
Comments are closed.