ಕರಾವಳಿ

ಲಂಚ ಸ್ವೀಕರಿಸುತ್ತಿದ್ದಾಗಲೇ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ..!

Pinterest LinkedIn Tumblr

ಕುಂದಾಪುರ: ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆಯ ಸಿಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಸೀಜ್ ಮಾಡಿದ್ದ 407 ವಾಹನ ಬಿಡಿಸಲು ಕಡತ ಮುಂದೂಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ ಪೂಜಾರಿ ವ್ಯಕ್ತಿಯೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆದಿದೆ. ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಲೋಕಾಯುಕ್ತ ಮಂಗಳೂರು ಎಸ್‌ಪಿ ಸೈಮನ್, ಡಿವೈಎಸ್‌ಪಿ ಪ್ರಕಾಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್ ಹಾಗೂ ರಫೀಕ್ ಹಾಗೂ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Comments are closed.