ಕುಂದಾಪುರ: ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಂಚಾರ ಠಾಣಾ ವ್ಯಾಪ್ತಿಯ ಹೆಮ್ಮಾಡಿ ಹಾಲು ಡೈರಿ ಸರ್ಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ (48) ಮೃತಪಟ್ಟ ದುರ್ದೈವಿ.
ಮೃತ ಮಹಾಬಲ್ ಖಾಸಗಿ ಬಸ್ಸು ಚಾಲಕರಾಗಿದ್ದು, ಕೊನೆಯ ಟ್ರಿಪ್ ಮುಗಿಸಿ ತಮ್ಮ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Comments are closed.