ಕರಾವಳಿ

‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಉಡುಪಿಯಲ್ಲಿ ಚಾಲನೆ ನೀಡಿದ ಸಿ.ಟಿ ರವಿ

Pinterest LinkedIn Tumblr

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಉಡುಪಿಯ ಕಡಿಯಾಳಿಯಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರುಗಳಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಕಟ್ಟಡ ಮಾಲಕ ಮುರಳೀಧರ ಪೈ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರ.ಕಾರ್ಯದರ್ಶಿ ಅಲ್ವಿನ್ ಡಿಸೋಜಾ, ಬಿಜೆಪಿ ಉಡುಪಿ ನಗರ ಪ್ರ.ಕಾರ್ಯದರ್ಶಿ ದಿನೇಶ್ ಅಮೀನ್, ಗ್ರಾಮಾಂತರ ಪ್ರ.ಕಾರ್ಯದರ್ಶಿ ಸಚಿನ್ ಪೂಜಾರಿ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಪ್ರಮುಖರಾದ ರಾಧಾಕೃಷ್ಣ ಶೆಟ್ಟಿ, ದಿನಕರ ಪೂಜಾರಿ, ಕಿಶೋರ್ ಕರಂಬಳ್ಳಿ ಮೊದಲಾದವರು ಉಪಸ್ಥಿತರಿದ್ದರು.

Comments are closed.