ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಿಂಗ ಅಸಮಾತೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಸಬಲೀಕರಣಕ್ಕಾಗಿ ಪ್ರತಿಪಾದಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಆಸ್ಪತ್ರೆಯ ಮುಖ್ಯ ಆಡಳಿತ ಶಸ್ತ್ರ ಚಿಕಿತ್ಸಕ ಡಾ. ರಾಬರ್ಟ್ ರೆಬೆಲ್ಲೋ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಇತರೆ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ (ಪ್ರಭಾರ) ಶುಶ್ರುಷ ಅಧಿಕ್ಷಕಿ ಅನ್ನಪೂರ್ಣ ಟಿ.ಆರ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.
ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇಲ್ಲಿಯ ಅಧ್ಯಕ್ಷರು ಹಾಗೂ ಇತರ ಸದಸ್ಯರಿದ್ದರು. ಈ ಕಾರ್ಯಕ್ರಮದಲ್ಲಿ 10 ಹೆಣ್ಣು ಮಕ್ಕಳಿಗೆ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇವರ ವತಿಯಿಂದ ಬೆಳ್ಳಿಯ ನೆನಪಿನ ಕಾಣಿಕೆಯನ್ನು ನೀಡಲಾಯಿತು.
Comments are closed.