ಕರ್ನಾಟಕ

ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ: 32 ಶಾಸಕರಿಗೆ ನಿಗಮ‌ಮಂಡಳಿ ಅಧ್ಯಕ್ಷ ಸ್ಥಾನ.!

Pinterest LinkedIn Tumblr

ಬೆಂಗಳೂರು: ರಾಜ್ಯ ಸರ್ಕಾರ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ.

ಮುಂದಿನ ಎರಡು ವರ್ಷದ ಅವಧಿಗೆ ನಿಗಮ‌ಮಂಡಳಿಯ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾದೊಂದಿಗೆ ನೇಮಿಸಲಾಗಿದೆ.

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

ಮುದ್ದೆಬಿಹಾಳ ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್​ಡಿಎಲ್ (ಕರ್ನಾಟಕ ಸೋಪ್ಸ್ ಆಂಡ್ ಡಿಟರ್ಜಂಟ್ಸ್)

ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

ಬಾಗಲಕೋಟೆ ಶಾಸಕ ಯಮುನಪ್ಪ.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

ಬ್ಯಾಡಗಿ ಶಾಸಕ ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ರೋಣ ಶಾಸಕ ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

ಶೋರಾಪುರ ಶಾಸಕ ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

ಅರಸಿಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

ಹುಬ್ಬಳ್ಳಿ ದಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

ಸಾಗರ ಶಾಸಕ ಬಿ.ಕೆ ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್​ಸಿ

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

ಶ್ರೀರಂಗಪಟ್ಟಣ ಶಾಸಕ ಎ.ಬಿ ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

ಆನೇಕಲ್ ಶಾಸಕ ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

ಧಾರವಾಡ ಶಾಸಕ ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

ಕಲ್ಬುರ್ಗಿ ಉತ್ತರದ ಶಾಸಕ ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

ಹಾನಗಲ್ ಶಾಸಕ ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

ಕೆ.ಜಿ.ಎಫ್ ಶಾಸಕರಾದ ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

Comments are closed.