ಕರ್ನಾಟಕ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಚ್.ಡಿ ರೇವಣ್ಣಗೆ ಮಧ್ಯಂತರ ಜಾಮೀನು

Pinterest LinkedIn Tumblr

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಹೆಚ್ ಡಿ ರೇವಣ್ಣ, ಜಾಮೀನು ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ನಾಳೆ ಮಧ್ಯಾಹ್ನದ ವರೆಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು 5 ಲಕ್ಷ ರೂಪಾಯಿ ಬಾಂಡ್ ನೀಡಲು ಮಾಜಿ ಸಚಿವರಿಗೆ ಸೂಚನೆ ನೀಡಿದೆ. ನಾಳೆ ಮಧ್ಯಾಹ್ನ 3 ಗಂಟೆ ವೇಳೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.

Comments are closed.