ಕರ್ನಾಟಕ

‘ಲೋಕ’ ಮಹಾ ರಿಸಲ್ಟ್: ಅಂಚೆ ಮತಗಳ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳಿಗೆ ಮುನ್ನಡೆ.!

Pinterest LinkedIn Tumblr

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕ್ರಿಯೆ ಆರಂಭಗೊಂಡಿದ್ದು ಕಳೆದ ಕೆಲವು ದಿನಗಳಿಂದ ಕಾಯುತ್ತಿದ್ದ ಚುನಾವಣೆಯ ಫ‌ಲಿತಾಂಶದ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.

ಸುಮಾರು 82 ದಿನಗಳ ಕಾಲ ನಡೆದ ಸುದೀರ್ಘ‌ ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಗಳು ಬೆಳಿಗ್ಗೆನಿಂದ ಆರಂಭಗೊಂಡಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ. ಆ ಬಳಿಕ ವಿದ್ಯುನ್ಮಾನ ಮತಯಂತ್ರಗಳಲ್ಲಿರುವ ಮತಗಳನ್ನು ಲೆಕ್ಕ ಹಾಕಲಾಗುತ್ತದೆ ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭಸುವ ಸಾಧ್ಯತೆಯಿದೆ.

ಅಂಚೆ ಮತದಲ್ಲಿ ಬಿಜೆಪಿಗೆ ಮುನ್ನಡೆ:
ಉಡುಪಿ-ಚಿಕ್ಕಮಗಳೂರು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಂಚೆ ಮತಗಳಲ್ಲಿ ಆರಂಭದಲ್ಲೇ ಬಿಜೆಪಿ ಮೇಲುಗೈ ಸಾಧಿಸಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೆ ಹಿನ್ನಡೆ ಅನುಭವಿಸಿದ್ದಾರೆ. ಇತ್ತ ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಂಡ್ಯದಲ್ಲಿ ಹೆಚ್‌ ಡಿ ಕುಮಾರಸ್ವಾಮಿ ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್‌ ಚೌಟ ಮುನ್ನಡೆ ಕಾಯ್ದುಕೊಂಡಿದ್ದಾರೆ.

543 ಲೋಕಸಭಾ ಕ್ಷೇತ್ರಗಳಿಗಾಗಿ ಒಟ್ಟು 8,360 ಅಭ್ಯರ್ಥಿಗಳು ಸ್ಪರ್ಧೆ: ಜಗತ್ತಿನ ಅತೀ ದೊಡ್ಡ ಚುನಾವಣೆ ಇದಾಗಿರುವುದರಿಂದ ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗಾಗಿ 8,360 ಅಭ್ಯರ್ಥಿಗಳ ಭವಿಷ್ಯ ಇಂದು ಹೊರಬೀಳಲಿದೆ.
ಇದರಿಂದರೊಂದಿಗೆ ಆಂಧ್ರ ಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆ ಸೇರಿದಂತೆ 25 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫ‌ಲಿತಾಂಶವೂ ಮಂಗಳವಾರವೇ ಹೊರಬೀಳಲಿದೆ.

 

Comments are closed.