ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
(file photo)
ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಜೊತೆ ಸ್ಯಾಂಡಲ್ ವುಡ್ ನ ಸ್ಟಾರ್ ಹಾಸ್ಯ ನಟ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಿದ್ದಾರೆಂದು ಹೇಳಲಾಗುತ್ತಿದೆ.
ಕೊಲೆನಡೆದ ಶನಿವಾರ ಮಧ್ಯಾಹ್ನದಿಂದ ಸ್ಟೋನಿಬ್ರೂಕ್ ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ಜೊತೆ ಚಿಕ್ಕಣ್ಣ ಅವರು ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಎಂದು ದರ್ಶನ್ ಹೊರಟಿದ್ದರು ಎನ್ನಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇದೀಗ ಚಿಕ್ಕಣ್ಣ ಅವರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ. ಹಾಸ್ಯನಟ ವಿಚಾರಣೆಗೆ ಹಾಜರಾದ ಬಳಿಕ ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಯಾವುದಾದರೂ ಚರ್ಚೆಯಾಗಿತ್ತಾ ಎನ್ನುವ ಬಗ್ಗೆ ಮಾಹಿತಿ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
Comments are closed.