ಪ್ರಮುಖ ವರದಿಗಳು

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ ಜಾಮೀನು ಮಂಜೂರು

Pinterest LinkedIn Tumblr

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.

ಮದ್ಯದ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರ ಅರ್ಜಿ ಪರಿಶೀಲಿಸಿದ ರೋಸ್ ಅವೆನ್ಯೂ ಕೋರ್ಟ್ ಇಂದು ಬೆಳಗ್ಗೆ ತೀರ್ಪು ಕಾಯ್ದಿರಿಸಿದ ನಂತರ ರಜಾಕಾಲದ ನ್ಯಾಯಾಧೀಶ ನ್ಯಾಯಮೂರ್ತಿ ಬಿಂದು ಅವರು ಆದೇಶವನ್ನು ಹೊರಡಿಸಿದ್ದಾರೆ.

2021-22ರ ದೆಹಲಿ ಮದ್ಯ ನೀತಿಯಲ್ಲಿ ಕಿಕ್‌ಬ್ಯಾಕ್‌ಗಿ ಸ್ವೀಕರಿಸಲಾಗಿದೆ ಎಂದು ಹೇಳಲಾದ ಹಣವನ್ನು ಲಾಂಡರ್ ಮಾಡುವ ಸಂಚಿನ ಭಾಗವಾಗಿರುವ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು.ಜಾರಿ ನಿರ್ದೇಶನಾಲಯವು (ED) ಈ ಲೋಪದೋಷಗಳು ಕೆಲವು ಮದ್ಯ ಮಾರಾಟಗಾರರಿಗೆ ಲಾಭದಾಯಕವಾಗಿದೆ ಎಂದು ಆರೋಪಿಸಿತ್ತು ಸ್ವೀಕರಿಸಿದ ಲಂಚವನ್ನು ಗೋವಾದಲ್ಲಿ ಎಎಪಿಯ ಚುನಾವಣ ಪ್ರಚಾರಕ್ಕೆ ಬಳಸಲಾಗಿದೆ ಎಂದು ಆರೋಪಿಸಿ ತನಿಖೆ ನಡೆಸುತ್ತಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

Comments are closed.