ಪ್ರಮುಖ ವರದಿಗಳು

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ

Pinterest LinkedIn Tumblr

ಹತ್ರಾಸ್: ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.

ಘಟನೆ ಹಿನ್ನೆಲೆ: ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದಾರೆ.

7 ಮಕ್ಕಳು ಹಾಗೂ ಓರ್ವ ಪುರುಷನನ್ನು ಹೊರತುಪಡಿಸಿದರೆ, ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Comments are closed.