ವಯನಾಡ್: ಕೇರಳದ ವಯನಾಡ್ನಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 151 ಕ್ಕೆ ಏರಿಕೆಯಾಗಿದೆ. 211 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ, ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮಂಗಳವಾರ ನಸುಕಿನ ಜಾವ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ನೂರಾರು ಮನೆಗಳು ಮತ್ತು ಜನರು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಲವಾರು ಮನೆಗಳು ಧ್ವಂಸಗೊಂಡಿದ್ದು ಮರಗಳು ಬೇರುಸಮೇತ ಬಿದ್ದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು.
ವಯನಾಡ್, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯೊಂದಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Comments are closed.